ಸ್ಫೂರ್ತಿ ನೀಡುವ ಝಾನ್ಸಿರಾಣಿ ಲಕ್ಷ್ಮೀಬಾಯಿ
ಸ್ಫೂರ್ತಿ ನೀಡುವ ಝಾನ್ಸಿರಾಣಿ ಲಕ್ಷ್ಮೀಬಾಯಿ ! ಅಸಾಮಾನ್ಯ ಪರಾಕ್ರಮದಿಂದ ಸತತ ಸ್ಫೂರ್ತಿ ನೀಡುವ ಝಾನ್ಸಿರಾಣಿ ಲಕ್ಷ್ಮೀಬಾಯಿ ! ಹಿಂದೂಸ್ಥಾನದಲ್ಲಿ ೧೮೫೭ರಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕ ವೀರ ಪರಾಕ್ರಮಿಗಳು ಪ್ರಜ್ವಲಿಸಿದರು. ಅವರಲ್ಲಿ ರಣರಾಗಿಣಿ ಝಾನ್ಸಿಯ ರಾಣಿ ಲಕ್ಷ್ಮೀಬಾಯಿ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜನ್ಮ ಮತ್ತು ಬಾಲ್ಯ ಎರಡನೇ ಬಾಜೀರಾವ ಪೇಶ್ವೆಯವರ ಸಂಬಂಧಿ ಚಿಮಾಜೀ ಅಪ್ಪಾರವರ ವ್ಯವಸ್ಥಾಪಕರಾಗಿದ್ದ ಮೋರೊಪಂತ ತಾಂಬೆ ಮತ್ತು ಭಗೀರಥಿಬಾಯಿಯವರಿಗೆ ಕಾರ್ತಿಕ ಕೃಷ್ಣ ೧೪, ೧೭೫೭ ವರ್ಷ ಅಂದರೆ ಆಂಗ್ಲ ಪಂಚಾಂಗಕ್ಕನುಸಾರ ೧೯ ನವೆಂಬರ ೧೮೩೫ ರಂದು ರಾಣಿ ಲಕ್ಷ್ಮೀಬಾಯಿಯ ಜನನವಾಯಿತು. ಮಗುವಿಗೆ ‘ಮಣಿಕರ್ಣಿಕಾ’ ಎಂದು ಹೆಸರಿಟ್ಟರು. ಮೋರೋಪಂತರು ಅವಳನ್ನು ಪ್ರೀತಿಯಿಂದ ‘ಮನುತಾಯಿ’ ಎಂದು ಕರೆಯುತ್ತಿದ್ದರು. ಮನು ನೋಡಲು ಸುಂದರ ಮತ್ತು ತುಂಬಾ ಬುದ್ಧಿವಂತೆ. ಮನುಗೆ ೩-೪ ವರ್ಷವಿರುವಾಗಲೇ ಮಾತೃವಿಯೋಗ ಅನುಭವಿಸಬೇಕಾಯಿತು. ಅವಳು ಮುಂದೆ ಬ್ರಹ್ಮಾವರ್ತಾದ ಎರಡನೇ ಬಾಜೀರಾವ ಪೇಶ್ವೆಯವರ ಆಶ್ರಯದಲ್ಲಿ ಬೆಳೆದಳು. ಯುದ್ಧಕಲೆಯ ಶಿಕ್ಷಣ ಬ್ರಹ್ಮಾವರ್ತಾದಲ್ಲಿ ನಾನಾಸಾಹೇಬ ಪೇಶ್ವೆ ತಮ್ಮ ಬಂಧು ರಾವಸಾಹೇಬರವರೊಂದಿಗೆ ಕತ್ತಿವರಸೆ, ಬಂದೂಕು ಚಲಾಯಿಸುವುದು ಮತ್ತು ಕುದುರೆ ಸವಾರಿಯನ್ನು ಕಲಿಯುತ್ತಿದ್ದರು. ಮನು ಸಹ ಅವರೊಂದಿಗೆ ಎಲ್ಲ ಯುದ್ಧಕಲೆಗಳನ್ನು ಕಲಿತು ಅದರಲ್ಲಿ ನೈಪುಣ್ಯ ಪಡೆದುಕೊಂಡಳು....